ಎಕೀನಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ


ವಿಜಯ ಸಿಂಧೂರ ತಾಳಿಕೋಟೆ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಫೇ.28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರ ಉರ್ದು ಕ್ಲಸ್ಟರ್ ಸಿಆರ್‌ಪಿಯಾದ ಮೊಹಮ್ಮದ್ ಜಾವೀದ ಅಬ್ದುಲ್ ರಹಮಾನ ಎಕೀನ(ತಾಳಿಕೋಟಿ) ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ “ಮಹಾತ್ಮ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಜಾವೀದ ಯಕೀನ ಅವರು ಇದನ್ನು ತಮ್ಮ ವೈಯಕ್ತಿಕ ಸಾಧನೆ ಎಂದು ಪರಿಗಣಿಸದೆ ಶಿಕ್ಷಕ ಸಮುದಾಯದ ಸಹಕಾರ ಮತ್ತು ಪ್ರೋತ್ಸಾಹದ ಫಲವೆಂದು ಹೇಳಿದರು. ಸನ್ಮಾನಿತ ಶಿಕ್ಷಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರು, ರಾಜ್ಯದ್ಯಕ್ಷ ಚಂದ್ರಶೇಖರ್ ನುಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಎಚ್ಎಸ್, ಜಿಲ್ಲಾಧ್ಯಕ್ಷ ಅರ್ಜುನ್ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಲಾಭಕ್ಷ ವಾಲಿಕಾರ,ಕೊಣದಿ ಸರ್, ತಾಲೂಕ ಅಧ್ಯಕ್ಷರಾದ ಬಿ. ಟಿ.ವಜ್ಜಲ್, ಹಾಗೂ ತಾಲೂಕ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಅಂಬಿಕಾ ಗೋಗಿ, ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಪ್ರಶಸ್ತಿ ಮುಂದಿನ ದಿನಗಳಲ್ಲಿ ನನಗೆ ಇನ್ನಷ್ಟು ನಿಷ್ಠೆ ಪ್ರಮಾಣಿಕತೆ ಮತ್ತು ಸಮರ್ಪಣ ಭಾವದಿಂದ ಶಿಕ್ಷಣ ಸೇವೆ ಸಲ್ಲಿಸಲು ಪ್ರೇರಣೆಯಾಗಲಿದೆ ಎಂದು ತಿಳಿಸಿ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *