ಅಭಿವೃದ್ಧಿಯ ಬಜೆಟ್
ವಿಜಯ ಸಿಂಧೂರ ರೋಣ
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ , ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ತಾಪಂ ಮಾಜಿ ಸದಸ್ಯ ಅಂದಪ್ಪ ಬಿಚ್ಚೂರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ ನೀಡಿದ್ದು, ಇದೊಂದು ಉತ್ತಮ ಬಜೆಟ್ ಆಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ, ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದ್ದು, ಇದೊಂದು ಜನಪರ ಕಾಳಜಿಯ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
