ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭಿನಂದನೆ

ವಿಜಯ ಸಿಂಧೂರ

ತಾಳಿಕೋಟೆ:ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಮರ್ಥ ಮಲ್ಲಿಕಾರ್ಜುನ ಶಾಮನೂರ ಹಾಗೂ ಉಮೇಶ್ ಎಚ್. ಮೇಟಿ ಅವರು ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ತಾಳಿಕೋಟೆ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸೀಫ ಕೆಂಭಾವಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಎರಡೂ ಕ್ಷೇತ್ರಗಳ ಮತದಾರರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳ ಈ ಭರ್ಜರಿ ಗೆಲುವಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ನೀಡಿದ ಬೆಂಬಲವೇ ಮುಖ್ಯ ಕಾರಣವೆಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಉಸ್ತುವಾರಿ ವಹಿಸಿದ್ದ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಆರ್.ಬಿ. ತಿಮ್ಮಾಪುರ ಅವರ ಮಾರ್ಗದರ್ಶನದಲ್ಲಿ ಸಚಿವರು, ಶಾಸಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದು, ಉಮೇಶ್ ಮೇಟಿ ಅವರ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.ಇದಲ್ಲದೆ, ಈ ಉಪಚುನಾವಣೆಯ ಫಲಿತಾಂಶವು 2028ರ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!