ಬಾಲ್ಯ ವಿವಾಹ ಸಾಮಾಜಿಕ ಶಾಪ: ತಡೆಗಟ್ಟಲು ನೈತಿಕ ಜಾಗೃತಿ ಅಗತ್ಯ :ಬೆಟದೇಶ ಮಾಳೇಕೊಪ್ಪ

ವಿಜಯ ಸಿಂಧೂರ ಯಲಬುರ್ಗಾ

ಬಾಲ್ಯ ವಿವಾಹವು ಸಮಾಜಕ್ಕೆ ಅಂಟಿದ ದೊಡ್ಡ ಶಾಪವಾಗಿದೆ. ಇದನ್ನು ಕೇವಲ ಕಾನೂನಿನ ಮೂಲಕ ಮಾತ್ರವಲ್ಲದೇ, ಪೋಷಕರು ಮತ್ತು ಶಿಕ್ಷಕರಲ್ಲಿ ನೈತಿಕ ಜಾಗೃತಿ ಮೂಡಿಸುವ ಮೂಲಕ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ. ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದೇಶ ಮಾಳೇಕೊಪ್ಪ ತಿಳಿಸಿದರು.

ಬುಧವಾರ ನಗರದಲ್ಲಿ ಬುದ್ದ ಬಸವ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪಟ್ಟಣ ಪಂಚಾಯತ್, ಯಲಬುರ್ಗಾ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಸದಸ್ಯರುಗಳಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ತರಬೇತಿ ಕಾರ್ಯಕ್ರಮ”. ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ತಡೆಗೆ ಪ್ರಬಲ ಕಾನೂನುಗಳಿವೆ. ಕಾನೂನಿನ ಅರಿವಿಲ್ಲ ಎಂಬ ಕಾರಣ ನೀಡಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನುಬದ್ಧ ಮದುವೆಗೆ ಹುಡುಗನಿಗೆ 21 ವರ್ಷ ಮತ್ತು ಹುಡುಗಿಗೆ 18 ವರ್ಷ ತುಂಬಿರಲೇಬೇಕು. ಯಾವುದು ನೈತಿಕವಾಗಿ ಸರಿಯೋ ಅದು ಕಾನೂನಿನ ಪ್ರಕಾರವೂ ಸರಿಯಾಗಿರುತ್ತದೆ. ನೈತಿಕ ಜೀವನ ನಡೆಸಿದರೆ ಕೋರ್ಟ್, ಪೊಲೀಸ್ ಠಾಣೆ, ಆಸ್ಪತ್ರೆ ಮೆಟ್ಟಿಲು ಹತ್ತುವ ಅವಶ್ಯಕತೆ ಬರುವುದಿಲ್ಲ’ ಎಂದು ಹೇಳಿದರು.

ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಇಲಾಖೆಗಳು ಒಗ್ಗಟ್ಟಾಗಿ ಕೆಲಸ ಮಾಡಿದರೆ ಮಾತ್ರ ಈ ಸಾಮಾಜಿಕ ಪಿಡುಗನ್ನು ತಡೆಯಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಮಾತನಾಡಿ, ‘ಬಾಲ್ಯ ವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಕೇವಲ ಜಿಲ್ಲಾ ಅಥವಾ ತಾಲೂಕು ಮಟ್ಟದ ಕಣ್ಗಾವಲು ಸಾಕಾಗದು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಹೆಚ್ಚಿನ ನಿಗಾ ಮತ್ತು ತರಬೇತಿ ಅಗತ್ಯವಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಇತ್ತೀಚೆಗೆ ತರಲಾದ ಪ್ರಮುಖ ತಿದ್ದುಪಡಿಗಳ ಕುರಿತು ಅಧಿಕಾರಿಗಳು ಜಾಗರೂಕರಾಗಿರಬೇಕು. ಹಿಂದೆ ಬಾಲ್ಯ ವಿವಾಹ ನಡೆದರೆ ಮಾತ್ರ ಎಫ್.ಐ.ಆರ್ ದಾಖಲಿಸಲಾಗುತ್ತಿತ್ತು. ಆದರೆ ಹೊಸ ತಿದ್ದುಪಡಿಯಂತೆ, ಬಾಲ್ಯ ವಿವಾಹಕ್ಕೆ ನಿಶ್ಚಿತಾರ್ಥ ಮಾಡಿಕೊಂಡರೂ ಅದು ಅಪರಾಧವೆಂದು ಪರಿಗಣಿಸಲ್ಪಟ್ಟು ಎಫ್.ಐ.ಆರ್ ದಾಖಲಿಸಲು ಅವಕಾಶವಿದೆ’ ಎಂದು ಎಚ್ಚರಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿಂಧೂ ಅಂಗಡಿ ಮಾತನಾಡಿ,ಬಾಲ್ಯ ವಿವಾಹ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಆದರೆ ಇನ್ಮುಂದೆ ಬಾಲ್ಯರನ್ನು ನಿಶ್ಚಿತಾರ್ಥ ಮಾಡುವುದು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ( ಕರ್ನಾಟಕ ತಿದ್ದುಪಡಿ) ವಿಧೇಯಕ 2025 ಕ್ಕೆ ಅನುಮೋಮನೆ ಕೊಡಲಾಗಿದೆ ಎಂದರುರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಮಾಣ ವರ್ಷಪ್ರತಿ ಹೆಚ್ಚುತ್ತಲೇ ಇದೆ.‌ ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.‌ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) 2025 ಕರಡು ಮಸೂದೆ ಸಿದ್ಧಪಡಿಸಲಾಗಿ, ಬಾಲ್ಯ ವಿವಾಹ ಅಲ್ಲ ನಿಶ್ಚಿತಾರ್ಥ ಮಾಡಿದರೂ ಕಠೀಣ ಕ್ರಮ ಜರುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಬಾಬುಸಾಬ ಬಬಲಾದಿ, ನೇತ್ರಾವತಿ ಹಿರೇಮಠ, ವನರಾಜ, ಮಹೇಶ ಬಡಿಗೇರ, ನಿವೇದಿತಾ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

Leave a Reply

Your email address will not be published. Required fields are marked *