ತಾಳಿಕೋಟಿಯಲ್ಲಿ ಪ್ರಜಾಸೌಧ ಸ್ಥಳ ವಿವಾದ: 48ನೇ ದಿನಕ್ಕೂ ಮುಂದುವರೆದ ಧರಣಿ, ಉಗ್ರ ಹೋರಾಟದ ಎಚ್ಚರಿಕೆ.

ವಿಜಯ ಸಿಂಧೂರ, ತಾಳಿಕೋಟೆ
ತಾಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ತಾಳಿಕೋಟಿ ತಾಲೂಕು ಹೋರಾಟ ಸಮಿತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹವು ಇಂದು 48ನೇ ದಿನಕ್ಕೆ ಕಾಲಿಟ್ಟಿದೆ.
ಪಟ್ಟಣದಿಂದ ಸುಮಾರು 4–5 ಕಿಲೋಮೀಟರ್ ದೂರದಲ್ಲಿರುವ ನಿರ್ಜನ ಪ್ರದೇಶದಲ್ಲಿ ಪ್ರಜಾಸೌಧ ನಿರ್ಮಿಸಲು ತಾಲೂಕು ಆಡಳಿತ ತೆಗೆದುಕೊಂಡಿರುವ ನಿರ್ಧಾರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸ್ಥಳದ ಆಯ್ಕೆಯಿಂದ ರೈತರು, ವೃದ್ಧರು ಮಹಿಳೆಯರು, ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ನಾಗರಿಕರಿಗೆ ಅನಾನುಕೂಲ ಉಂಟಾಗಲಿದೆ ಎಂಬುದು ಹೋರಾಟಗಾರರ ಪ್ರಮುಖ ಆರೋಪವಾಗಿದೆ.


ಹೋರಾಟ ಸಮಿತಿಯ ಸಹ ಕಾರ್ಯದರ್ಶಿ ಮಹೇಶ ಛಲವಾದಿ ಮಾತನಾಡಿ, ಕಳೆದ ಹಲವು ದಿನಗಳಿಂದ ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದರೂ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಎಲ್ಲಾ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಅವರು ಹೇಳಿದರು.
ಹೋರಾಟಗಾರರು ಅಧಿಕಾರಿಗಳು ಸಮಸ್ಯೆಯನ್ನು ಆಲಿಸದೆ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಈ ಸಂಧರ್ಭದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ದಶರತಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಆರ್ ಎಸ್ ಪಾಟೀಲ (ಕುಚಬಾಳ) ಮುತ್ತಪ್ಪ ಚಮಲಾಪುರ, , ಕಾಶೀನಾಥ ಮುರಾಳ, ಮಾಸುಮಸಾಬ ಕೆಂಭಾವಿ, ಮುರಿಗೆಪ್ಪ ಸರಶೆಟ್ಟಿ, ಮಾದೇವಿ ಬಳಗಾನೂರ, ಶಕುಂತಲಾ, ಕಾವೇರಿ ಕಟ್ಟಿಮನಿ, ಸುಮಂಗಲ ಪಾಟೀಲ, ದತ್ತು ಹೆಬಸೂರ, ಮೈನು ಬೆಪಾರಿ, ಪರಶುರಾಮ ತಂಗಡಗಿ, ನಾಗೇಶ ಕಟ್ಟಿಮನಿ, ದೇವೇಂದ್ರ ಹಾದಿಮನಿ, ವಿಜಯಸಿಂಗ್ ಹಜೇರಿ, ರಾಮಣ್ಣ ಕಟ್ಟಮನಿ,ಪ್ರಭುಗೌಡ ಪಾಟೀಲ ಬಳಗಾನೂರ, ಸಂಜು ಬರದೇನಾಳ, ಕಳಕುಸಾ ರಂಗರೇಜ್, ಸುರೇಶ ಹಜೇರಿ, ಮಹಿಂದ್ರಕರ ಮಹೇಶ ಛಲವಾದಿ, ಪ್ರಕಾಶ್ ಹಜೇರಿ ಮುದಕಪ್ಪ ಬಡಿಗೇರ, ಸಿರಸಕುಮಾರ ಹಜೇರಿ, ಸುರೇಶ ಪುಲುಸ್, ಅಮಿತಸಿಂಗ್ ಮನಗೂಳಿ, ಮಲ್ಲು ಮೇಟಿ, ಸದ್ದಾಂ ಹುಸೇನ್ ಬೀಳಗಿ, ಸೇರಿದಂತೆ ಅನೇಕರು ಮತ್ತು ಪಟ್ಟಣದ ಗಣ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!