ಮುಖ್ಯಮಂತ್ರಿ ಪರಿಹಾರ ನಿಧಿಗೆ 15 ಕೋಟಿ ಚೆಕ್ ವಿತರಣೆ

ಬೆಂಗಳೂರು: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್‌ ಲಿಮಿಟೆಡ್‌ (ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ಗಣಿಗಾರಿಕೆಯಲ್ಲಿ ತೊಡಗಿರುವ ಕರ್ನಾಟಕ ಸರ್ಕಾರದ ಸಂಪೂರ್ಣ ಮಾಲೀಕತ್ವದ ಒಂದು ಉನ್ನತ ಸಾರ್ವಜನಿಕ ಉದ್ದಿಮೆಯಾಗಿದ್ದು, ಸಂಸ್ಥೆಯು 20234-25ನೇ ಸಾಲಿನಲ್ಲಿ ರೂ.1053 ಕೋಟಿ ವಹಿವಾಟು ನಡೆಸಿ ರೂ. 449 ಕೋಟಿ ತೆರಿಗೆ ಪೂರ್ವ ಲಾಭ ಗಳಿಸಿದೆ.

ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಕಂಪನಿಯು 2024-25ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದ ಮೇಲೆ ಷೇರುದಾರರಿಗೆ (ಸರ್ಕಾರಕ್ಕೆ) ರೂ.133 ಕೋಟಿಗಳನ್ನು ಲಾಭಾಂಶವಾಗಿ ನೀಡಲು ಮಂಡಳಿಯ ನಿರ್ದೇಶಕರು ಒಪ್ಪಿಗೆ ನೀಡಿದ್ದು, ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿದೆಪ್ರತಿ ವರ್ಷ ಈ ನಿಗಮದಿಂದ ರೂ.15 ಕೋಟಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆಯವ್ಯಯದಲ್ಲಿ ನಿಗದಿಪಡಿಸಲಾಗುತ್ತಿದ್ದು, 2024-25ನೇ ಸಾಲಿಗೆ ರೂ.15 ಕೋಟಿಗಳನ್ನು ನಿಗದಿಪಡಿಸಿದ್ದು, ರೂ. 15 ಕೋಟಿಗಳನ್ನು ಅರ್ಪಿಸಲಾಯಿತು.

ಮಾ.13ರಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷ ಜಿ.ಎಸ್‌. ಪಾಟೀಲ 2024-25ನೇ ಸಾಲಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.15 ಕೋಟಿಗಳ ಧನಾದೇಶವನ್ನು, ರೂ.449 ಕೋಟಿಗಳ ಲಾಭಾಂಶದ ಧನಾದೇಶವನ್ನು ಹಾಗೂ ರೂ.1053 ಕೋಟಿಗಳ ವಿಶೇಷ ಲಾಭಾಂಶವನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಶೋಕ ಮಿರ್ಜಿ ಅಧ್ಯಕ್ಷರು ಆಪ್ತ ಕಾರ್ಯದರ್ಶಿಗಳು ಸೇರಿದಂತೆ ನಿಗಮದ ಸಿಬ್ಬಂದಿಗಳು ಇದ್ದರು

ಮುಖ್ಯಮಂತ್ರಿಗಳಿಂದ ನಿಗಮ ಮಂಡಳಿ ಅಧ್ಯಕ್ಷರಿಗೆ ಅಭಿನಂದನೆಗಳು

ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನಿಗಮ ಮಂಡಳಿ ಅಧ್ಯಕ್ಷರಿಗೆ ಮುಖ್ಯಮಂತ್ರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಅವರ ನಿಷ್ಠೆ, ಸಮರ್ಪಣೆ ಹಾಗೂ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವಲ್ಲಿ ತೋರಿದ ನಾಯಕತ್ವವನ್ನು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ರಾಜ್ಯದ ಸಮಗ್ರ ಅಭಿವೃದ್ಧಿಗೆ ನಿಗಮ ಮಂಡಳಿಗಳ ಪಾತ್ರ ಮಹತ್ವದ್ದಾಗಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧ್ಯಕ್ಷರು ಇನ್ನಷ್ಟು ಚುರುಕಾಗಿ ಕೆಲಸ ಮಾಡುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.ಅಧ್ಯಕ್ಷರ ಮುಂದಾಳತ್ವದಲ್ಲಿ ನಿಗಮ ಮಂಡಳಿ ಇನ್ನಷ್ಟು ಸಾಧನೆಗಳನ್ನು ಮಾಡಲಿ ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲಿ ಎಂದು ಮುಖ್ಯಮಂತ್ರಿ ಹಾರೈಸಿದರು.

Leave a Reply

Your email address will not be published. Required fields are marked *