ವಿಜಯ ಸಿಂಧೂರ ರೋಣ
ತಾಲೂಕಿನ ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಇತ್ತೀಚೆಗೆ ನಡೆದ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಗ್ರಾಮೀಣ ಮಕ್ಕಳಿಗೆ ಪ್ರೇರಣೆಯಾಗಿದ್ದಾನೆ.

ಗುರುಬಸವ ಶರಣಪ್ಪ ಕಂಬಳಿ ಈ ವಿದ್ಯಾರ್ಥಿ ಗ್ರಾಮದ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ, ಶಿಕ್ಷಕರ, ತಂದೆ, ತಾಯಿ ಮಾರ್ಗದರ್ಶನದಲ್ಲಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ ಈ ವಿದ್ಯಾರ್ಥಿಯ ಸಾಧನೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮದ ಶಿಕ್ಷಣ ಪ್ರೇಮಿಗಳು, ಸಾರ್ವಜನಿಕರು ಅಭಿನಂದಿಸಿದ್ದಾರೆ
