ವಿಜಯ ಸಿಂಧೂರ ಲಕ್ಷ್ಮೇಶ್ವರ
ಶಿರಹಟ್ಟಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಶಾಲೆ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು

ವಿದ್ಯಾರ್ಥಿಗಳು ಪ್ರತಿಭಟನೆ ನುಡಿಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯ ಅಧ್ಯಕ್ಷ ಚಂದ್ರಶೇಖರ ಬಿ.ಟಿ ಅವರು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ಸಾರಿಗೆ ಘಟಕದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರರು
ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜಿ ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ಒತ್ತಾಯಿಸಿದರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿದ ಶಿರಹಟ್ಟಿ ಸಾರಿಗೆ ಘಟಕದ ವ್ಯವಸ್ಥಾಪಕರು, ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿ ನಿಮ್ಮ ಶಾಲೆ ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬಿಡುವ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು

ಇದರಿಂದ ವಿದ್ಯಾರ್ಥಿಗಳು ಇನ್ನು ಮುಂದೆ ಹೀಗಾಗದಂತೆ ನಮಗೆ ಬಸ್ ಬಿಡಬೇಕೆಂದು ಅಳಲು ತೋಡಿಕೊಂಡರು, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕಣ್ಣೀರು ಒರಿಸಿದ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಇನ್ಮುಂದೆ ಸಮಯಕ್ಕೆ ಸರಿಯಾಗಿ ಬಸ್ ಓಡಾಡುವ ವ್ಸಯವಸ್ಥೆ ಮಾಡುವುದು ಸಾರಿಗೆ ಅಧಿಕಾರಿಗಳ ಕರ್ತವ್ಯ ನಾನು ಸಹ ನಿಮ್ಮೊಂದಿಗೆ ಇರುತ್ತೇವೆ, ನೀವು ನೆಮ್ಮದಿಯಿಂದ ಶಿಕ್ಷಣದ ಕಡೆಗೆ ಸಂಪೂರ್ಣ ಗಮನವನ್ನು ಕೊಡಿ, ಬಸ್ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಂಡು ಕಣ್ಣಿರು ಹಾಕಬೇಡಿ ಎಂದು ವಿದ್ಯಾರ್ಥಿಗಳ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಿದರು.ಇದರಿಂದ ಪ್ತರತಿಭಟನೆ ಕೈಬಿಟ್ಟು ತಮ್ಮ ಊರುಗಳಿಗೆ ತೆರಳಿದರು
