ಆದರಹಳ್ಳಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ

ವಿಜಯ ಸಿಂಧೂರ ಲಕ್ಷ್ಮೇಶ್ವರ

ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಕಳೆದ ಶುಕ್ರವಾರ ಮದ್ಯಾಹ್ನ 3:00 ಗಂಟೆಯ ಸುಮಾರಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಜರುಗಿದೆ.ಮಹಾಂತೇಶ್ ಪಾಟೀಲ ಎಂಬುವರ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

ಕಳೆದ ಒಂದು ವಾರದ ಹಿಂದೆ ಸುರಿದ ಅಧಿಕ ಮಳೆಯ ಪರಿಣಾಮ ಮನೆಯ ಮೇಲ್ಚಾವಣಿ ಹಾಗೂ ಗೋಡೆಗಳು ತಂಪು ಆವರಿಸಿದ ಕಾರಣ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬೀಳಲು ಕಾರಣವಾಗಿದೆ ಎಂದು ಮನೆಯ ಮಾಲಿಕ ಮಹಾಂತೇಶ್ ಪಾಟೀಲ ಇವರು ಮಾಹಿತಿ ನೀಡುವ ಮೂಲಕ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

*ವರದಿ:*✍️ಚಂದ್ರಶೇಖರ ಸೋಮಣ್ಣವರ

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!