ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು

ಕಳಪೆ ಬೌಲಿಂಗ್‌, ಅಗ್ರ ಬ್ಯಾಟರ್‌ಗಳ ಹೀನಾಯ ಪ್ರದರ್ಶನಕ್ಕೆ ಭಾರತ ಬೆಲೆತೆತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಇಂದು ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡ 76 ರನ್‌ಗಳ ಹೀನಾಯ ಸೋಲು ಕಂಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್‌ನ ಸೂಪರ್-8 ಹಂತದ ಹೈವೋಲ್ವೇಜ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ಡೇವಿಡ್ ಮಿಲ್ಲರ್ (63 ರನ್) ಮತ್ತು ಟ್ರಸ್ಟನ್‌ ಸ್ಟಬ್ (44 ರನ್) ಅವರ ಸ್ಫೋಟಕ ಆಟದ ನೆರವಿನಿಂದ 187 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.ಭಾರತದ ಪರ ಜಸ್ಟೀತ್ ಬುಮ್ರಾ ಕೇವಲ 15 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ ಅಮೋಘ ಬೌಲಿಂಗ್ ಪ್ರದರ್ಶಿಸಿದರು.188 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಇಶಾನ್ ಕಿಶನ್ ಸೊನ್ನೆ ಸುತ್ತಿದರೆ, ಸೂರ್ಯಕುಮಾ‌ರ್ ಯಾದವ್ (18) ಮತ್ತು ಹಾರ್ದಿಕ್ ಪಾಂಡ್ಯ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು. ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಮತ್ತು ಮಾರ್ಕೊ ಜಾನ್ಸೆನ್ ಭಾರತದ ಬ್ಯಾಟಿಂಗ್ ಬೆನ್ನೆಲುಬು ಮುರಿದರು

Leave a Reply

Your email address will not be published. Required fields are marked *