ವಿಜಯ ಸಿಂಧೂರ, ಸಿಂದಗಿ
ಸ್ವಚ್ಛತೆ ಮತ್ತು ಶುದ್ಧತೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕವನ್ನು ದಿ. ಎಮ್ ಸಿ ಮನಗೂಳಿ ಪ್ರತಿಷ್ಠಾನದಿಂದ ಸ್ಥಾಪಿಸುವ ಮೂಲಕ ಮನಗೂಳಿ ಕುಟುಂಬ ಸಾಮಾಜಿಕ ಸೇವೆ ಮಾಡುತ್ತಿದೆ ಎಂದು ಸಾರಂಗಮಠದ ಪೂಜ್ಯಶ್ರೀ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಶ್ಲಾಘನೆ ವ್ಯಕ್ತಪಡಿಸಿದರು.

ಅವರು ಪಟ್ಟಣದ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಬಸ್ ನಿಲ್ದಾಣದಲ್ಲಿ ದಿ. ಎಂ ಸಿ ಮನಗೂಳಿ ಪ್ರತಿಷ್ಠಾನದಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಕಲುಷಿತ-ಮುಕ್ತ ನೀರು ಒದಗಿಸುವ ಉದ್ದೇಶದಿಂದ ಸಿಂದಗಿ ಬಸ್ ನಿಲ್ದಾಣದಲ್ಲಿ ಹೊಸ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡಿರುವದು ಸಂತಸ ತಂದಿದೆ . ಈ ಘಟಕ ಪ್ರಯಾಣಿಕರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಈ ವೇಳೆ ಶಾಸಕ ಅಶೋಕ್ ಮನಗೂಳಿ ಮಾತನಾಡಿ, ನಮ್ಮ ತಂದೆಯವರಾದ ದಿವಂಗತ ಎಂ ಸಿ ಮನಗೂಳಿ ಅವರ ಹೆಸರಿನ ಮೇಲೆ ದಿ. ಎಂ ಸಿ ಮನಗೂಳಿ ಪ್ರತಿಷ್ಠಾನವನ್ನು ಸ್ಥಾಪಿಸಿ ಅವರ ಕನಸಿನಂತೆ ಅನೇಕ ಸಾಮಾಜಿಕ ಸೇವೆಗಳನ್ನ ಪ್ರತಿಷ್ಠಾನ ಮಾಡುತ್ತಾ ಬಂದಿದೆ. ಸಿಂದಗಿ ಮತಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೊದಲ ಹಂತದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ ಮುಂದಿನ ದಿನಮಾನಗಳಲ್ಲಿ ಉಳಿದ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆರಂಭಿಸಲಾಗುವುದು. ಅದಲ್ಲದೆ ಪ್ರತಿಷ್ಠಾನದಿಂದ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು ಪ್ರಯಾಣಿಕರ ಆರೋಗ್ಯದ ಹಿತ ದೃಷ್ಟಿಯಿಂದ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರಾರಂಭಿಸಲಾಗಿದೆ ಇದರ ಸದುಪಯೋಗವನ್ನು ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಅಶೋಕ್ ವಾರದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ,ಆಲಮೇಲ ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ್ ಕೊಳಾರಿ, ಪರಶುರಾಮ್ ಕಾಂಬಳೆ, ಸಾಯಬಣ್ಣ ಪುರಾದಾಳ,ಎಂ. ಎ. ಖತೀಬ, ಶಿವಾನಂದ್ ಹಡಪದ್, ಪರಮಾನಂದ ಬಗಲಿ,ಸುನಂದಾ ಯಂಪುರೆ, ಜಯಶ್ರೀ ಹದನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
