ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚುನಾವಣೆಗಳನ್ನು ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಚುನಾವಣೆಗಳು ಮುಗಿದ ನಂತರ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ, ಚುನಾವಣೆಗಳು ಸಮೀಪಿಸಿವೆ. ಜನಗಣತಿಯೂ ನಡೆಯಲಿದೆ. ಹೀಗಾಗಿ, ಸದ್ಯ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಾಗದು ಎಂದರು.
