ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ 21ದಿನಗಳ ನಂತರ ಸಿದ್ದರಾಮಯ್ಯ ವಿಶ್ರಾಂತಿಗಾಗಿ ತಮ್ಮ ಕೆಲವೇ ಆಪ್ತರ ಜತೆಗೆ ಕೇರಳಂನ ಫಾರಂ ಹೌಸ್‌ವೊಂದಕ್ಕೆ ತೆರಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ನಿತ್ಯವೂ ಅವರ ಮನೆಗೆ ಆಪ್ತ ಶಾಸಕರು, ಸಚಿವ ಸ್ಥಾನದ ಆಕಾಂಕ್ಷಿಗಳು, ಅಭಿಮಾನಿಗಳ ದಂಡು ಭೇಟಿ ನೀಡುತ್ತಿತ್ತು. ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಜೂನ್ 18ರಂದು ನಡೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ ಚಲಾಯಿಸಿದ್ದರು. ನಂತರ ಜೂನ್ 21ರಂದು ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದರು. ಕಾರ್ಯಕ್ರಮದ ತರುವಾಯ ವಿಶ್ರಾಂತಿಗಾಗಿ ಕೇರಳಂನತ್ತ ಪಯಣ ಬೆಳೆಸಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿದ್ದಾಗ ಅವರು ಪ್ರತಿ ವರ್ಷ ವಿಶ್ರಾಂತಿಗಾಗಿ ಕೇರಳಂಗೆ ಹೋಗುತ್ತಿದ್ದರು. 2018-19ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ‘ಶಾಂತಿವನ’ಕ್ಕೆ ಹೋಗಿದ್ದರು. ಅಲ್ಲಿ ಆಪ್ತರ ಜತೆ ಸಮಾಲೋಚನೆಯನ್ನೂ ನಡೆಸಿದ್ದರು. ಈ ವಿಶ್ರಾಂತಿಯು ನಂತರದ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿತ್ತು.
