ವಿಜಯ ಸಿಂಧೂರ, ಲಕ್ಷ್ಮೇಶ್ವರ
ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಹುತೇಕ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹಾಗೂ 1008 ಬಡ ರೈತರ ಕಲ್ಯಾಣೋತ್ಸವ ನೆರವೇರಿಸಿದ ಕಲ್ಯಾಣ ಪುರುಷ ಬಿ.ಟಿ ಚಂದ್ರಶೇಖರ್ ಅವರು ಬುಧವಾರ ಶಿರಹಟ್ಟಿ ತಾಲೂಕಿನ ಛಬ್ಬಿ ,ವರವಿ ಗ್ರಾಮದ ಸಮಸ್ತ ರೈತರ ಸಭೆ ಸೇರಿಸಿ, ರೈತರ ಸಮಸ್ಯೆ ಕುಂದುಕೊರತೆಗಳನ್ನು ಆಲಿಸಿದರು.

ಗ್ರಾಮದಲ್ಲಿರುವ ಮೂಲಭೂತ ಸೌಲಭ್ಯ ರೈತರು ಜಮೀನುಗಳಿಗೆ ತೆರಳುವ ರಸ್ತೆ ದನಕರಗಳಿಗೆ ಕುಡಿಯುವ ನೀರು ಸೇರಿದಂತೆ ಹಲವಾರು ಸಮಸ್ಯೆಗಳನ್ನು ರೈತರೊಂದಿಗೆ ಸಭೆ ನಡೆಸಿ ವಿಷಯ ಪಡೆದುಕೊಂಡರು

ಈ ಸಮಯದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ಟಿ ಚಂದ್ರಶೇಖರ್ ಅವರು ಎಲ್ಲಾ ರೈತರೊಂದಿಗೆ ನಾನು ಸದಾ ಇರುತ್ತೇನೆ ಶಿರಹಟ್ಟಿ ತಾಲೂಕಿನಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಹಂತ ಹಂತವಾಗಿ ಪ್ರಯತ್ನಿಸುತ್ತೇನೆ. ನಿಮ್ಮೆಲ್ಲರ ಸಹಕಾರ ಅತಿ ಅವಶ್ಯಕವಾಗಿದೆ ಎಂದರು ಇದಕ್ಕೆ ಗ್ರಾಮಸ್ಥರು ಸಹ ನಿಮ್ಮ ಹೋರಾಟಕ್ಕೆ ನಮ್ಮ ಸಹಕಾರ ನಿರಂತವಾಗಿ ಇರುತ್ತದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು ಈ ಸಮಯದಲ್ಲಿ ರಾಜ್ಯ ರೈತೋದಯ ಹಸಿರು ಸೇನೆ ಸಂಘದ ಮಹಿಳಾ ಪದಾಧಿಕಾರಿಗಳು ರೈತ ಮುಖಂಡರು ಇದ್ದರು
