ಹತ್ತು ಸಾವಿರ ಲಂಚಕ್ಕೆ ಕೈ ಚಾಚಿ ಲೋಕಾ ಬಲೆಗೆ ಬಿದ್ದ ಎಎಸ್ಐ

ವಿಜಯ ಸಿಂಧೂರ ಗದಗ

ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದೆ. ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಹತ್ತು ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿರುವ ಘಟನೆ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ ಎಎಸ್ಐ ಚೆನ್ನಬಸಪ್ಪ ಇಂಗಳಳ್ಳಿ ಲೋಕಾಯುಕ್ತ ಟ್ರ್ಯಾಪ್ಗೆ ಸಿಲುಕಿದ್ದಾರೆ. ಶಹರ ಪೊಲೀಸ್ ಠಾಣೆಯ ಎಎಸ್ಐ ಚೆನ್ನಬಸಪ್ಪ ಇಂಗಳಳ್ಳಿ ಅವರು ಪಿಟಿಷನ್ ಅರ್ಜಿ ವಿಚಾರಣೆಗೆ ಸುಮಾರು ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೀರೇಶ ಪೂಜಾರ ಎಂಬುವರು ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆ, ಇವತ್ತು ಪೊಲೀಸ್ ಠಾಣೆಯಲ್ಲಿ ಹತ್ತು ಸಾವಿರ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐಗಳಾದ ಪಿ.ಜಿ ಕವಟಗಿ, ಎಸ್.ಎಸ್. ತೇಲಿ ಸೇರಿ ಹಲವು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *