ಮಾರ್ಚ್ ೨೭ ರಂದು ಡಾ.ಬಾಬು ಜಗಜೀವನ್ ರಾಮ್,ಡಾ.ಬಿ.ಆರ್.ಅಂಬೇಡ್ಕರ್ ವರ ಜನ್ಮದಿನಾಚರಣೆ ಪೂರ್ವಭಾವಿ ಸಭೆ.

ರೋಣ:ದಿ.೫-೪-೨೬ ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ೧೧೯ ನೇ ಹಾಗೂ ದಿ.೧೪-೪-೨೬ ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೫ ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಮಾರ್ಚ ೨೭ರಂದು ಬೆಳಿಗ್ಗೆ ೧೦.೩೦ ಗಂಟೆಗೆ ತಹಶಿಲ್ದಾರರ ಕಚೇರಿಯ ಸಭಾಭವನದಲ್ಲಿ ಕರೆಯಲಾಗಿದೆ.

ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ವರ್ಗ ಮತ್ತು ಎಲ್ಲಾ ಸಮಾಜದ ಅಧ್ಯಕ್ಷರು,ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಸಮಾಜದ ಮುಖಂಡರು ಗಣ್ಯ ವ್ಯಕ್ತಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಯನ್ನು ನೀಡಬೇಕು ಎಂದು ತಹಸಿಲ್ದಾರ,ರಾಷ್ಟ್ರ ನಾಯಕರ ಜಯಂತ್ಯೋತ್ಸವದ ಸಮಿತಿ ಅಧ್ಯಕ್ಷರು ನಾಗರಾಜ್ ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!