ಹೃದಯಾಘಾತ ಶಿಕ್ಷಕಿ ಸಾವು

ವಿಜಯ ಸಿಂಧೂರ, ಬೆಂಗಳೂರ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ ಐಆರ್) ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯು ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಶಮಂತ ಕುಮಾರಿ (೪೪) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್‌ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಮಧುಮೇಹ,ರಕ್ತದೊತ್ತಡ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಹೃದಯಾಘಾತವಾಗಿ ನಿಧನರಾಗಿದ್ದಾರೆ.


ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!