ತಾಳಿಕೋಟೆ :ತಾಲೂಕಿನ ಬ.ಸಾಲವಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಶಾಲೆ ಫಲಿತಾಂಶ ಶೇ.96.62 ರಷ್ಟಾಗಿದೆ.

ಕುಮಾರಿ ಭೂಮಿಕಾ ಸತ್ಯಂಪೇಟ 613 (98.08%) ಶಾಲೆಗೆ ಪ್ರಥಮ. ಕುಮಾರ ರಾಮನಗೌಡ ಕೋಳೂರು 605 (96.80%) ದ್ವಿತೀಯ ಹಾಗೂ ಕುಮಾರಿ ಪಲ್ಲವಿ ಸಜ್ಜನ 602 (96.32%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 51 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸ್ ಕ್ಲಾಸ್ ಆಗಿದ್ದಾರೆ. ಒಟ್ಟು 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇವರಲ್ಲಿ 88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.
