ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ವಿಜಯ ಸಿಂಧೂರ ಗಜೇಂದ್ರಗಡ

ಗಜೇಂದ್ರಗಡ: ಪಟ್ಟಣದ ತಾಲೂಕ ಪಂಚಾಯತ್ ಚಿಂತನ ಸಭಾಂಗಣದಲ್ಲಿ ಇಂದು ಗ್ಯಾರಂಟಿ ಸಮಿತಿ ತಾಲೂಕ ಅಧ್ಯಕ್ಷರಾದ ಶರಣಪ್ಪ ಬೆಟಗೇರಿ ಅಧ್ಯಕ್ಷತೆಯಲ್ಲಿ 5 ಗ್ಯಾರಂಟಿ ಯೋಜನೆಗಳ ತಾಲೂಕ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಗ್ಯಾರಂಟಿ ಯೋಜನೆಯ ಐದು ಇಲಾಖೆಗಳ ಅಧಿಕಾರಿಗಳ ತಾಲೂಕಿನ ಮಾಹಿತಿ ಪಡೆದುಕೊಂಡರು. ಯೋಜನೆ ಗುರಿ ಸಾಧಿಸಲು ತಿಳಿಸಿದರು.ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಪಂಚ ಗ್ಯಾರಂಟಿ ಯೋಜನೆಯೂ ಒಂದಾಗಿದೆ. 5 ಯೋಜನೆಗಳು ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಸರ್ವ ಸದಸ್ಯರು ಕೆಲಸ ಮಾಡಬೇಕಾಗಿದೆ ಎಂದರು.

ಈಗಾಗಲೇ ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಎಲ್ಲರೂ ಪಡೆಯುತ್ತಿದ್ದಾರೆ. ಇನ್ನೂ ಅಲ್ಲಲ್ಲಿ ಉಳಿದವರಿಗೆ ಮಾಹಿತಿ ನೀಡಿ ಯೋಜನೆ ತಲುಪಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಸರ್ವಸದಸ್ಯರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಪಂ. ರಾ), ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!