ಅನಿಲ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ತಪ್ಪಿತು ಭಾರಿ ಅನಾಹುತ

ರೋಣ : ನಗರದ ಹೊರವಲಯದಲ್ಲಿ ಇಂದು ಬೆಳಿಗ್ಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಿಂದಾಗಿ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಗೃಹೋಪಯೋಗಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ರೋಣ – ಗಜೇಂದ್ರಗಡ ರಸ್ತೆಯಲ್ಲಿ ಪಟ್ಟಣದ ಶೇಖರಯ್ಯ ಅಜ್ಜನ ಮಠದ ಬಳಿ ಪಲ್ಟಿಯಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಗಜೇಂದ್ರಗಡ ಪಟ್ಟಣದ ಕಡೆ ತೆರಳುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಲಾರಿ ರಸ್ತೆ ಪಕ್ಕದ ಗುಂಡಿಗೆ ಜಾರಿದ್ದು ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿದ್ದು ಈ ವೇಳೆ ಲಾರಿಯಲ್ಲಿ ತುಂಬಿದ್ದ ಗ್ಯಾಸ್ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಹಾಗೂ ಸಿಲಿಂಡರ್ ಗಳಿಂದಲೂ ಯಾವುದೇ ಸೋರಿಕೆ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!