ಯಾದಗಿರಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣ ಅಂತ್ಯ ಕಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ.

ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಒಟ್ಟಾಗಿ ಈಜಲು ಹೋಗಿದ್ದರು ಎನ್ನಲಾಗಿದೆ.ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನಕೃಷಿ ಹೊಂಡದಲ್ಲಿ ಈಜಲು ಹೋಗಿ 4 ಮಕ್ಕಳು ಜಲಸಮಾಧಿ ವಿಷಯ ತಿಳಿದು ಪೋಷಕರು ಮತ್ತು ಸಂಬಂಧಿಕರಿಗೆ ತೀವ್ರ ಆಘಾತವಾಗಿದೆ. ಮೃತ ಮಕ್ಕಳೆಲ್ಲರೂ ತೀರಾ ಚಿಕ್ಕ ವಯಸ್ಸಿನವರಾಗಿದ ಕಾರಣ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಉತ್ತಮ ಭವಿಷ್ಯದ ಕನಸು ಕಂಡು, ನೂರಾರು ಆಸೆ ಮತ್ತು ಆಕಾಂಕ್ಷೆಗಳನ್ನು ಇಟ್ಟುಕೊಂಡಿದ್ದ ಹೆತ್ತವರೀಗ ಅಕ್ಷರಶಃ ಕಂಗಾಲಾಗಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

