ದಾವಣಗೆರೆ ಉಪಚುನಾವಣೆ ಉಸ್ತುವಾರಿಯಾಗಿ ಸಂಜಯ ಆರ್ ದೊಡ್ಡಮನಿ ನೇಮಕ

ಗದಗ :‌ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾ
ಪರಿಶಿಷ್ಟ ಜಾತಿ ವಿಭಾಗದ ಮಾದ್ಯಮ ವಕ್ತಾರರಾದ ಸಂಜಯ ಆರ ದೊಡ್ಡಮನಿ ಅವರನ್ನು ಚುನಾವಣಾ ಪ್ರಚಾರ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರ ಗೆಲುವಿಗಾಗಿ ಶ್ರಮಿಸುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾಗಿರುವ ಡಿ,ಕೆ ಶಿವಕುಮಾರ್ ಹಾಗೂ ಎಸ್.ಸಿ ಘಟಕದ ರಾಜ್ಯಾಧ್ಯಕ್ಷರಾದ ಆ‌ರ್.ಧರ್ಮಸೇನ್ ಅವರು
ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಜವಾಬ್ದಾರಿಗಳನ್ನು ಕೊಟ್ಟು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಯಾಗಿ ಶ್ರಮಿಸುವಂತೆ ತಿಳಿಸಿದ್ದಾರೆ.

ಸಂಜಯ ಆರ ದೊಡ್ಡಮನಿ ಅವರಿಗೆ ಪ್ರಮುಖ ಜವಾಬ್ದಾರಿಯನ್ನು ಕೊಟ್ಟು ಚುನಾವಣಾ ಪ್ರಚಾರ, ಮಾಧ್ಯಮ ಸಂಪರ್ಕ ಮತ್ತು ಪಕ್ಷದ ಸಂದೇಶವನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ
ಕೆಪಿಸಿಸಿ ರಾಜ್ಯಾಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾಗಿರುವ ಡಿ,ಕೆ ಶಿವಕುಮಾರ್ ಹಾಗೂ ಎಸ್.ಸಿ ಘಟಕದ ರಾಜ್ಯಾಧ್ಯಕ್ಷರಾದ ಆ‌ರ್.ಧರ್ಮಸೇನ್ ಅವರು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: ವಿಷಯವನ್ನು ರಕ್ಷಿಸಲಾಗಿದೆ - Content is protected !!