ವಿಜಯ ಸಿಂಧೂರ, ತಾಳಿಕೋಟೆ ಸ್ಥಳೀಯ ಸಜ್ಜನ್ ಗಾಣಿಗರ ಸೇವಾ ಸಂಘದ ವತಿಯಿಂದ ತಾಳಿಕೋಟಿ ಹಾಗೂ ತಾಲೂಕಿನಾದ್ಯಂತ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇಕಡಾ 85ಕ್ಕೂ ಹೆಚ್ಚು ಅಂಕ ಗಳಿಸಿ ಸಮಾಜಕ್ಕೆ ಕೀರ್ತಿ ತಂದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ರೀ ಕಾಶಿನಾಥ್ ಸಜ್ಜನ್ ಅವರು, "ಸಮಾಜದಲ್ಲಿರುವ ಇಂತಹ ಅಪ್ರತಿಮ ಪ್ರತಿಭೆಗಳನ್ನು ಗುರುತಿಸಿ,…